ಹೆಚ್ಚಿನ ಕುಟುಂಬಗಳಲ್ಲಿ ಗಂಡು – ಹೆಣ್ಣು ಎಂಬಂತೆ 1-2 ಮಕ್ಕಳು ಎಲ್ಲರಿಗೂ ಬೆಂಗಳೂರಿನಲ್ಲಿ ಕೆಲಸ ಹೆಂಡತಿ ಮಕ್ಕಳೊಂದಿಗೆ ಅಲ್ಲೇ ಸಂಸಾರ ದೊಡ್ಡ ಆಸ್ತಿ ದೊಡ್ಡ ಮನೆ ನೋಡಿಕೊಂಡು 60-70 ದಾಟಿರುವ ವೃದ್ಧ ಅಪ್ಪ –ಅಮ್ಮಂದಿರು ಮಾತ್ರ ಹಳ್ಳಿಯಲ್ಲಿದ್ದಾರೆ ಅವರಿಗೆ ಕೂಡುವುದಿಲ್ಲ ಕೆಲಸ ಮಾಡಲು ಶಕ್ತಿಯಿಲ್ಲ.
ಕೃಷಿ – ಬೇಸಾಯಕ್ಕೆ ಕೂಲಿ ಕೆಲಸಗಾರರು ಸಿಗುವುದಿಲ್ಲ. ತೋಟ, ಗದ್ದೆ ಎಲ್ಲಾ ಹಾಳು. ತರಕಾರಿಗಳು ಬೆಳೆಯುತ್ತಿಲ್ಲ. ಹಪ್ಪಳ-ಉಪ್ಪಿನಕಾಯಿ ಮಾಡುವವರಿಲ್ಲ ಎಲ್ಲರೂ ಪೇಟೆಯಲ್ಲಿರುವ ಕಾರಣ ಹಳ್ಳಿಯ ಶಾಲೆಗಳಲ್ಲಿ ಮಕ್ಕಳಿಲ್ಲ ಮದುವೆ- ಉಪನಯನಕ್ಕೆ ಎಲ್ಲರೂ ತಮ್ಮ ತಮ್ಮ ವಾಹನಗಳಲ್ಲಿ ಹಾರಿ ಬರುತ್ತಾರೆ ಊಟ ಮಾಡಿ ಕೈ ತೊಳೆದು ತಿರುಗಿ ನೋಡಿದಾಗ ಮತ್ತೆ ಬೆಂಗಳೂರಿಗೆ ಹೊರಡಲು ಕಾರು ಸ್ಟಾರ್ಟ್ ಆಗಿದೆ ಸಂಬಂಧಗಳು ಕಳಚಿಕೊಳ್ಳುತ್ತಿವೆ. ಹೆತ್ತ ಕರುಳಿಗೆ ಮಕ್ಕಳನ್ನು ಮೊಮ್ಮಕ್ಕಳನ್ನು ಮುದ್ದಿಸುವ ಆಲಿಂಗಿಸುವ ಅವಕಾಶವಿಲ್ಲ
ಸ್ವರ್ಣ ಕುಂದಾಪುರ