ಭಾರತದ ಪ್ರತಿಯೊಂದು ಮನೆಯಲ್ಲಿಯೂ ದೀಪಾವಳಿ ಆದಂತಹ ಅನುಭವವಾಗಿತ್ತು.ಅಂತದ್ದೇ ಪವಿತ್ರವಾದಂತಹ ಇನ್ನೊಂದು ದಿನಶ್ರೀ ರಾಮನವಮಿ ಏಪ್ರಿಲ್ 17. ಶ್ರೀರಾಮ ಎಂದ ಕೂಡಲೇ ಏನೋ ಒಂದು ಶಕ್ತಿ ನಮ್ಮೊಳಗೆ ಜಾಗೃತವಾದ ಅನುಭವ . ಆಂಜನೇಯ ಸ್ವಾಮಿಯ ಆರಾಧ್ಯದೈವ ಶ್ರೀ ರಾಮ.ಹಿಂದೂ ಧರ್ಮದಲ್ಲಿ ಶ್ರೀ ರಾಮನವಮಿ ಎಂದರೆ ಹಬ್ಬದ ಸಂಭ್ರಮ. ಚೈತ್ರ ಮಾಸದ ಒಂಭತ್ತನೇ ದಿನ, ಅಂದರೆ ವರ್ಷದ ಮೊದಲ ತಿಂಗಳಿನಲ್ಲಿ ಬರುವ ಹಬ್ಬ. ಮಹಾವಿಷ್ಣುವಿನ ಏಳನೇಯ ಅವತಾರವಾದ ಶ್ರೀರಾಮನು ಜನಿಸಿದ ನವಮಿಯಂದು ಈ ಹಬ್ಬ ಆಚರಿಸಲಾಗುತ್ತದೆ. ಈ ದಿನ ಪುಷ್ಯಾ ನಕ್ಷತ್ರದಲ್ಲಿ ಮಧ್ಯಾಹ್ನದ ವೇಳೆಯಲ್ಲಿ ಕರ್ಕಾಟಕ ಲಗ್ನದಲ್ಲಿ ಅಯೋಧ್ಯೆಯಲ್ಲಿ ರಾಮನು ಜನಿಸಿದನೆಂಬ ನಂಬಿಕೆ ಇದೆ. ಈ ವರ್ಷದಲ್ಲಿ ಏಪ್ರಿಲ್ 17ರಂದು ಶ್ರೀ ರಾಮನವಮಿಯನ್ನು ಆಚರಿಸಲಾಗುತ್ತದೆ. ರಾಮ ಎಂದರೆ ಏನೋ ಒಂದು ಆನಂದ. ಅನೇಕ ಪುರಾಣಗಳಲ್ಲಿಯೂ ಶ್ರೀ ರಾಮನ ನಾಮ ಉಚ್ಚಾರಣೆಯನ್ನು ಮಾಡುವುದರಿಂದ ಅನೇಕ ಪಾಪಗಳನ್ನು ಕಳೆಯಬಹುದೆಂದು ಹೇಳಲಾಗಿದೆ.ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣವನ್ನು ಭಕ್ತಿ, ಶ್ರದ್ಧೆಗಳಿಂದ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ. ರಾಮನವಮಿ ಹಬ್ಬ ಅತ್ಯಂತ ಸರಳ ಹಾಗೂ ಸುಲಭವಾಗಿದ್ದು, ಈ ಹಬ್ಬವನ್ನು ದೇಶದಾದ್ಯಂತ ಬಹಳಷ್ಟು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಪ್ರಮುಖವಾಗಿ ಉತ್ತರ ಭಾರತದಲ್ಲಂತೂ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಶ್ರೀರಾಮ ಜನಿಸಿದ ಸ್ಥಳ ಅಯೋಧ್ಯೆಯಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಹಬ್ಬದ ದಿನದಂದು ರಾಮನ ಭಜನೆ, ಕೀರ್ತನೆ ಹಾಗೂ ಮೆರವಣಿಗಳನ್ನು ನಡೆಸಲಾಗುತ್ತದೆ. ರಾಮನವಮಿಯಂದು ಸೂರ್ಯ ದೇವನ ಪ್ರಾರ್ಥನೆಯೊಂದಿಗೆ ಹಬ್ಬ ಆರಂಭವಾಗುತ್ತದೆ. ಏಕೆಂದರೆ, ಶ್ರೀರಾಮನು ಸೂರ್ಯವಂಶಸ್ಥನಾಗಿದ್ದು, ಶಕ್ತಿಯ ಪ್ರತೀಕವಾಗಿರುವ ಸೂರ್ಯ ದೇವರ ಆರಾಧನೆ ಮೂಲಕ ರಾಮನವಮಿ ಆರಂಭವಾಗುತ್ತದೆ. ಹಬ್ಬದ ದಿನದಂದು ರಾಮನ ಸ್ತೋತ್ರ ಹಾಗೂ ಭಜನೆಗಳನ್ನು ಹಾಡುವ ಮೂಲಕ ದೇವರನ್ನು ಸಂಪ್ರೀತಿಗೊಳಿಸಲಾಗುತ್ತದೆ.ಈ ಸಲ ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ ಆಗಿರುವುದರಿಂದ ಶ್ರೀರಾಮನವಮಿಯನ್ನು ಇನ್ನು ವಿಜೃಂಭಣೆಯಿಂದ ಆಚರಿಸಬಹುದು. ರಾಮ ಪ್ರತಿಯೊಂದರಲ್ಲೂ ಆದರ್ಶ ಪುರುಷನಾಗಿ ಮರ್ಯಾದ ಪುರುಷೋತ್ತಮನಾಗಿ ವಿಶ್ವಕ್ಕೆ ಆದರ್ಶನಾಗಿರುತ್ತಾನೆ ಆದ್ದರಿಂದಲೇ ರಾಮನ ನ್ನುವಿಶ್ವಗುರು ಎಂದೇ ಹೇಳಬಹುದು.