Home » ಕೋಟ ಅಮೃತೇಶ್ವರಿ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ
 

ಕೋಟ ಅಮೃತೇಶ್ವರಿ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ

by Kundapur Xpress
Spread the love
ಕೋಟ : ಇಲ್ಲಿನ ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ ಅಂಗವಾಗಿ  ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದುಒಂಭತ್ತನೆ ದಿನದ ನವರಾತ್ರಿ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಕೋಟ ಪಡುಕರೆ ಕರಾವಳಿ ಓಷಿಯನ್ ಪ್ರಾಡಕ್ಟ್ ಮಾಲಿಕರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹಾಗೂ ಲೋಹಿತ್ ಮಲ್ಪೆ ಇವರ ಕುಟುಂಬಿಕರು ಚಂಡಿಕಾ ಸಪ್ತಶತಿ ಪಾರಾಯಣ,ದುರ್ಗಾಹೋಮದಲ್ಲಿ ಸೇವಾಕರ್ತರಾಗಿ ಭಾಗಿಯಾದರು.
ದೇಗುಲದ ಧಾರ್ಮಿಕ ವಿಧಿವಿಧಾನಗಳು ವೇ.ಮೂ ಮಧುಸೂಧನ ಬಾಯರಿ ನೇತೃತ್ವದಲ್ಲಿ ಜರಗಿತು.
ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಸಂಸದರ ಕುಟುಂಬಿಕರಿಗೆ ಪ್ರಸಾದ ವಿತರಿಸಿ ಗೌರವಿಸಿದರು.
ದೇಗುಲದಲ್ಲಿ ವಿಶೇಷ ಅಲಂಕಾರ ದೇವಿಯ ಒಂಭತ್ತನೆ ದಿನದ ಶಾರದೆಯ ಪುಷ್ಭಾಂಲಕಾರ  ಭಕ್ತರ ಗಮನ ಸೆಳೆದಳು.
ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರು,ಮುಖ್ಯಕಾರ್ಯನಿರ್ವಹಣಾಧಿಕಾರಿ, ಮಾಜಿ ಟ್ರಸ್ಟಿ ಸದಸ್ಯರು, ವ್ಯವಸ್ಥಾಪಕರು, ಸಿಬ್ಬಂದಿವರ್ಗ,ದೇಗುಲ ಅರ್ಚಕ ವೃಂದ ಉಪಸ್ಥಿತರಿದ್ದರು.ಅಪರಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಜನರು ಭಾಗಿಯಾದರು.ಸಂಜೆ ವಿವಿಧ ಭಜನಾ ತಂಡಗಳಿಂದ ಭಜನೆ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
   

Related Articles

error: Content is protected !!