280
ಕುಂಭಾಸಿ : ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಗುರುವಾರ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಸಹಸ್ರಾರು ಭಕ್ತರು ಶ್ರೀ ದೇವರ ದರ್ಶನ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು
ಸಂಕಷ್ಟಹರ ಚತುರ್ಥಿ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ಅಷ್ಟೋತ್ತರ ಸಹಸ್ರ ನಾರಿಕೇಳ ಗಣಯಾಗ ಸೇರಿದಂತೆ ಅನ್ನಸಂತರ್ಪಣೆ, ರಾತ್ರಿ ಸುವರ್ಣಪಾಲಿಕೆ, ರಜತ ರಥ, ರಂಗಪೂಜೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಶ್ರೀರಮಣ ಉಪಾಧ್ಯಾಯ, ವಿಶ್ರಾಂತ ಹಿರಿಯ ಆಡಳಿತ ಮೊಕ್ತೇಸರರಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ದೇವಿದಾಸ್ ಉಪಾಧ್ಯಾಯ, ಮ್ಯಾನೇಜರ್ ನಟೇಶ್ ಕಾರಂತ್, ಆಡಳಿತ ಮಂಡಳಿ ಸದಸ್ಯರು, ಅರ್ಚಕ ವರ್ಗ ಮತ್ತು ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು

