ಕುಂಭಾಸಿ : ಕರ್ನಾಟಕ ರಾಜ್ಯ ಲೋಕಾಯುಕ್ತ ಬಿ.ಎಸ್.ಪಾಟೀಲ್ ಹಾಗೂ ಅವರ ಪತ್ನಿ ಶೋಭಾ ಪಾಟೀಲ್ ಶುಕ್ರವಾರ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು
ಈ ಸಂದರ್ಭದಲ್ಲಿ ದೇವಳದ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ ಮತ್ತು ದೇವಳದ ವಿಶ್ರಾಂತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ದೇವಳದ ವತಿಯಿಂದ ಲೋಕಾಯುಕ್ತ ದಂಪತಿಗೆ ಶ್ರೀದೇವರ ಪ್ರಸಾದ ನೀಡಿ ಗೌರವಿಸಿ ಸನ್ಮಾನಿಸಿದರು
ಕುಂದಾಪುರ ಸಹಾಯಕ ಆಯುಕ್ತ ಮಹೇಶ್ಚಂದ್ರ, ತಹಸೀಲ್ದಾರ್ ಶೋಭಾಲಕ್ಷ್ಮೀ, ಲೋಕಾಯುಕ್ತ ಎಸ್ಪಿ ನಟರಾಜ್, ನಿರೀಕ್ಷಕರಾದ ಮಂಜುನಾಥ್ ಹಾಗೂ ಸಿಬ್ಬಂದಿ ಮತ್ತು ಪರ್ಯಾಯ ಆರ್ಚಕ ಕೆ.ಕೃಷ್ಣಾನಂದ ಉಪಾಧ್ಯಾಯ ಹಾಗೂ ಸಹೋದರರು ಮತ್ತು ಮ್ಯಾನೇಜರ್ ನಟೇಶ್ ಕಾರಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.