ಕುಂದಾಪುರ : ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಸಂಕಷ್ಟಹರ ಚತುರ್ಥಿ ಪ್ರಯುಕ್ತ ಶ್ರೀದೇವರಿಗೆ ವಿಶೇಷ ಪೂಜೆ ಜರುಗಿತು ಲೋಕ ಕಲ್ಯಾಣಾರ್ಥವಾಗಿ ಗಣಹೋಮವನ್ನು ಯಜ್ಞಮಂಟಪದಲ್ಲಿ ಪುರೋಹಿತರು ನಡಸಿಕೊಟ್ಟರು
ಶ್ರೀದೇವರಿಗೆ ವಿಶೇಷ ಅಲಂಕಾರ, ಅಭಿಷೇಕ, ಸತ್ಯಗಣಪತಿ ವ್ರತ ಸಹಿತ ಮಹಾಪೂಜೆಯೊಂದಿಗೆ ಹೋಮ ಹವನಾದಿಗಳು, ರಾತ್ರಿ ಮಹಾ ರಂಗಪೂಜೆಯೊಂದಿಗೆ ರಜತ ರಥೋತ್ಸವ ನಡೆಯಿತು. ಸಾಂಸ್ಕೃ ತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಕೋದಂಡ ರಾಮ ಯಕ್ಷಗಾನ ಮಂಡಳಿ ಹನುಮಗಿರಿ ಅವರಿಂದ ಇಂದ್ರಪ್ರಸ್ಥ ಯಕ್ಷಗಾನ ಪ್ರದರ್ಶನಗೊಂಡಿತು.
ಕುಂಭಾಸಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ನೇತೃತ್ವದಲ್ಲಿ ಸಂಕಷ್ಟಹರ ಚತುರ್ಥಿ ಪ್ರಯುಕ್ತ ದೇವಳಕ್ಕೆ ಬರುವ ಭಕ್ತಾದಿಗಳಿಗೆ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು. ಈ ಸಂದರ್ಭ ಕುಂಭಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಶೋಭಾ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಪರೀಕ್ಷೆಗಳು ನಡೆದವು
ದೇವಳದ ಅನುವಂಶಿಕ ಆಡಳಿತ ಮೊತ್ತೇಸರ ಕೆ.ಶ್ರೀರಮಣ ಉಪಾಧ್ಯಾಯ, ವಿಕ್ರಾಂತ ಮೊಕ್ತಸರರಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಕೆ.ಕೃಷ್ಣಾನಂದ ಉಪಾಧ್ಯಾಯ ಮತ್ತು ಸಹೋದರರು, ದೇವಳದ ಮೊತ್ತೇಸರಾದ ಕೆ.ಪದ್ಮನಾಭ ಉಪಾಧ್ಯಾಯ, ಕೆ.ನಿರಂಜನ ಉಪಾಧ್ಯಾಯ, ಆರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕ ನಟೇಶ್ ಕಾರಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

