ಗಂಗಾವತಿ : ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ದ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯಸ್ವಾಮಿ ದೇಗುಲದ ಗೋಪುರಕ್ಕೆ ಚಿನ್ನದ ಲೇಪನ ಮಾಡುವುದಾಗಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಸೋಮವಾರ ಪಂಪಾ ಸರೋವರದಲ್ಲಿ ಹನುಮಮಾಲೆ ಧರಿಸಿ ಅಂಜನಾದ್ರಿ ಬೆಟ್ಟದ ಕೆಳಗೆ ಆಂಜನೇಯ ಸ್ವಾಮಿ ಪಾದುಕೆಗಳಿಗೆ ಪೂಜೆ ಸಲ್ಲಿಸಿದ ನಂತರ ಪತ್ರಕ ರ್ತರೊಂದಿಗೆ ಮಾತನಾಡಿದ ಅವರು, ಭಕ್ತರ ಸಹ ಕಾರ ಪಡೆದು ಗೋಪುರಕ್ಕೆ ಚಿನ್ನದ ಲೇಪನ ಮಾಡುವುದಾಗಿ ತಿಳಿಸಿದರು. ಹಿಂದಿನ ಬಿಜೆಪಿ ಸರ್ಕಾರದಿಂದ 100 ಕೋಟಿ, ಇಂದಿನ ಕಾಂಗ್ರೆಸ್ ಸರ್ಕಾರದಿಂದ 100 ಕೋಟಿ ಸೇರಿದಂತೆ ಅಂಜನಾದ್ರಿ ಅಭಿವೃದ್ಧಿಗೆ ಒಟ್ಟು 240 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಕೊಠಡಿಗಳು, ರಸ್ತೆ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ ಎಂದರು.