ಬೈಲೂರು : ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯುತ್ತಿರುವ ಶತಚಂಡಿಕಾ ಯಾಗ ಹಾಗೂ ಬ್ರಹ್ಮಮಂಡಲ ಸಲುವಾಗಿ ಆಯೋಜಿಸಲಾದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಎಂ.ಆರ್.ಜಿ ಗ್ರೂಪ್ ನ ಬಂಜಾರ ಪ್ರಕಾಶ್ ಶೆಟ್ಟಿ, ಕನ್ಯಾನ ಸದಾಶಿವ ಶೆಟ್ಟಿ, ಸಂತೋಷ್ ಶೆಟ್ಟಿ ಇನ್ನಾ, ಶತಚಂಡಿಕಾಯಾಗ ಹಾಗೂ ಬ್ರಹ್ಮಮಂಡಲ ಸೇವಾ ಸಮಿತಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉದ್ಯಮಿಗಳಾದ ಪುರುಶೋತ್ತಮ್ ಶೆಟ್ಟಿ ಹಾಗೂ ಗಣ್ಯರು ಉಪಸ್ಥಿತರಿದ್ದರು.