ಕುಂದಾಪುರ : ಕುಂದಾಪುರ ನಗರದ ಚಿಕ್ಕಮ್ಮನ ಸಾಲು ರಸ್ತೆಯಲ್ಲಿರುವ ಶ್ರೀ ಕ್ಷೇತ್ರ ಕಳಿನಕಟ್ಟೆ ಎಂದೇ ಪ್ರಸಿದ್ಧವಾದ ಶ್ರೀ ಚಿಕ್ಕಮ್ಮ ದೇವಿ ದೇವಸ್ಥಾನದಲ್ಲಿ ದಿನಾಂಕ 27.01.2025ನೇ ಸೋಮವಾರ ಹಾಗೂ 28 ನೇ ಮಂಗಳವಾರದಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರುಗಲಿದೆ
ಶ್ರೀ ಚಿಕ್ಕಮ್ಮ ದೇವಿ ಹಾಗೂ ಸಪರಿವಾರ ದೈವಗಳ ಗೆಂಡ ಮಹೋತ್ಸವ ಹಾಗೂ ಚಂಡಿಕಾ ಹೋಮ ಅನ್ನಸಂತರ್ಪಣೆ ನಾಗದರ್ಶನ ಡೆಕ್ಕೆಬಲಿ ಹಾಗೂ ಮಹಾ ಮಂಗಳಾರತಿಯೊಂದಿಗೆ ಪ್ರಸಾದ ವಿತರಣೆ ನಡೆಯಲಿದ್ದು ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ ಹಾಗೂ ದೈವರಾಜೆ ಶ್ರೀ ಬಬ್ಬುಸ್ವಾಮಿ ನಾಟಕ ಪ್ರದರ್ಶನಗೊಳ್ಳಲಿದೆ
ಗೆಂಡ ಮಹೋತ್ಸವ ಹಾಗೂ ಹಬ್ಬದ ಪ್ರಯಕ್ತ ನಡೆಯುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೆ ಭಕ್ತರು ಆಗಮಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಚಿಕ್ಕಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ನಾಗೇಶ್ ಎಂ ಪುತ್ರನ್ ತಿಳಿಸಿದ್ದಾರೆ