ಉಡುಪಿ : ಇಲ್ಲಿನ ದೊಡ್ಡಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಗುರುವಾರ ಕದಿರು ಕಟ್ಟುವ ಕಾರ್ಯಕ್ರಮದೊಂದಿಗೆ ವೈಭವದ ನವರಾತ್ರಿ ಮಹೋತ್ಸವವು ಶುಭಾರಂಭಗೊಂಡಿತು. ಪ್ರಾತಃಕಾಲ ಮಂಗಳವಾದ್ಯ ಸಹಿತವಾಗಿ ಕದಿರನ್ನು ಬರಮಾಡಿಕೊಂಡು, ಪೂಜೆ ನೆರವೇರಿಸಿ ಸಾನ್ನಿಧ್ಯಕ್ಕೆ ಕದಿರು ಕಟ್ಟಲಾಯಿತು. ನಂತರ ಕ್ಷೇತ್ರದ ವತಿಯಿಂದ ಬಂದ ಭಕ್ತಾದಿಗಳಿಗೆ ಕದಿರನ್ನು ವಿತರಿಸಲಾಯಿತುಧಾರ್ಮಿಕ ಕಾರ್ಯಕ್ರಮವಾಗಿ ಆದ್ಯ ಗಣಪತಿಯಾಗ, ನವಕ ಕಲಶ ಪ್ರಧಾನ ಹೋಮ, ಕಲಶಾಭಿಷೇಕ ಹಾಗೂ ಚಂಡಿಕಾಯಾಗ ಹಾಗೂ ದುರ್ಗಾ ಹೋಮಗಳು ಸಂಪನ್ನಗೊಂಡವು. ಸುನಿಲ್ – ಪುಷ್ಪಾ ಹಾಗೂ ಗೀತಾ – ಮಂದಾರ ಶೆಟ್ಟಿ ದಂಪತಿಯಿಂದ ಚಂಡಿಕಾಯಾಗ, ಶ್ರೀಮತಿ ಮತ್ತು ರಾಜೇಂದ್ರ ಪ್ರಸಾದ್ ದಂಪತಿಯಿಂದ ದುರ್ಗಾ ಹೋಮ ನೆರವೇರಿತು.
ಯಾಗದ ಅಂಗವಾಗಿ ಬ್ರಾಹ್ಮಣ ಸುವಾಸನೆ ಕನ್ನಿಕರಾಧನೆ, ಬ್ರಾಹ್ಮಣ ಆರಾಧನೆಗಳು ನೆರವೇರಿತು. ಮಧ್ಯಾಹ್ನ ನೆರವೇರಿದ ಮಹಾ ದುರ್ಗಾ ನಮಸ್ಕಾರ ಪೂಜೆ ಹಾಗೂ ರಂಗಪೂಜೆ ನೆರವೇರಿತು ಅನ್ನಸಂತರ್ಪಣೆಯಲ್ಲಿ ಸಹಸ್ರ ಸಂಖ್ಯೆಗೂ ಮಿಕ್ಕಿದ ಭಕ್ತರುಗಳು ಅನ್ನಪ್ರಸಾದವನ್ನು ಸ್ವೀಕರಿಸಿದರು.
ಶಾಂತ-ಸುರೇಶ್ ದಂಪತಿಯಿಂದ ಮಹಾ ದುರ್ಗಾ ನಮಸ್ಕಾರ ಪೂಜೆ ಹಾಗೂ ರಂಗಪೂಜೆ ನೆರವೇರಿತು ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ವಿವಿಧ ವಿನೋದಾವಳಿಗಳು ನಡೆದವು ಎಂದು ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ್ ತಿಳಿಸಿದ್ದಾರೆ.