110
ಕಾಪು : ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕಾ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಶ್ರೀ ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಹಾಗೂ ಶ್ರೀ ಶಿರೂರು ಮಠದ ಶ್ರೀ ಶ್ರೀ ಶ್ರೀ ವೇದವರ್ಧಧವನತೀರ್ಥ ಶ್ರೀಪಾದಂಗಳವರು ಆಶೀರ್ವಚಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವಿರೇಂದ್ರ ಹೆಗ್ಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಆತ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಶ್ ಶೆಟ್ಟಿ, ವೇದಮೂರ್ತಿ ಹೆರ್ಗ ಶ್ರೀ ಜಮರಾಮ ತಂತ್ರಿಗಳು ಉಪಸ್ಥಿತರಿದ್ದರು.

