Home » ಏಳನೇ ದಿನದ ಧಾರ್ಮಿಕ ಸಭೆ : ಸಾಂಸ್ಕೃತಿಕ ಕಾರ್ಯಕ್ರಮ
 

ಏಳನೇ ದಿನದ ಧಾರ್ಮಿಕ ಸಭೆ : ಸಾಂಸ್ಕೃತಿಕ ಕಾರ್ಯಕ್ರಮ

by Kundapur Xpress
Spread the love

ಕಾಪು : ಶ್ರೀ ಹೊಸಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ (ರಿ.) ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ   ನಡೆದ ಏಳನೇ ದಿನದ ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಸಕರು ಮತ್ತು ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಆಶೀರ್ವಚಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್, ಖ್ಯಾತ ಚಲನಚಿತ್ರ ನಟಿ, ಸಂಸದರಾದ ಕಂಗನಾ ರಣವತ್, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಡಾ. ಧನಂಜಯ ಸರ್ಜಿ, ಮಾಜಿ ಸಚಿವರಾದ ರಮಾನಾಥ ರೈ, ಪ್ರಮೋದ್ ಮಧ್ವರಾಜ್, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಕೆ ಪ್ರಕಾಶ್ ಶೆಟ್ಟಿ, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿಕ್ರಂ ಕಾಪು, ಉದ್ಯಮಿಗಳಾದ ಹರಿಯಪ್ಪ ಕೋಟ್ಯಾನ್, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಾಧವ ಆರ್ ಪಾಲನ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

 

Related Articles

error: Content is protected !!