ಕೋಟೇಶ್ವರ : ಇಲ್ಲಿನ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ದೇವರ ವಾರ್ಷಿಕ ಬ್ರಹ್ಮರಥೋತ್ಸವ ಕೊಡಿಹಬ್ಬದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ದೇವಳದ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಕೋಟೇಶ್ವರ ಪಟ್ಟಾಭಿರಾಮಚಂದ್ರ ದೇವಸ್ಥಾನದ ಆಡಳಿತ ಧರ್ಮದರ್ಶಿ ದಿನೇಶ್ ಕಾಮತ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ನಿವೃತ್ತ ಶಿಕ್ಷಕ ಕನರಾಡಿ ವಾದಿರಾಜ್ ಭಟ್ ಧಾರ್ಮಿಕ ಸಂದೇಶ ನೀಡಿದರು. ದೇವಳದ ಪ್ರಧಾನ ತಂತ್ರಿಗಳಾದ ಪ್ರಸನ್ನ ಕುಮಾರ್ ಐತಾಳ್, ದೇವಳದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ದೇವಳದ ವ್ಯವ ಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು, ಕುಂದಾಪುರ ತಹಸೀಲ್ದಾರ್ ಹಾಗೂ ದೇವಳದ ಆಡಳಿತಾಧಿಕಾರಿ ಶೋಭಾಲಕ್ಷ್ಮೀ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭ ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಾಗೂ ಕೋಟಿಲಿಂಗೇಶ್ವರ ಕಲಾ ಬಳಗ ಇವರಿಂದ ಯಕ್ಷಗಾನ ರಾಣಿ ರತ್ನಾವತಿ ಪ್ರಸಂಗ ರಂಗದಲ್ಲಿ ಪ್ರದರ್ಶನಗೊಂಡಿತ್ತು.
ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ದಾಮೋದರ ಶರ್ಮಾ ಕಾರ್ಯಕ್ರಮ ನಿರ್ವಹಿಸಿದರು.