196
ಉಡುಪಿ : ಇಂದು ಪರ್ಯಾಯ ಶ್ರೀಪಾದರಾದ ಪೂಜ್ಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರ ಆಹ್ವಾನದ ಮೇರೆಗೆ ಶ್ರೀ ಕೃಷ್ಣ ಮಠಕ್ಕೆ ಪ್ರಖ್ಯಾತ ಅಧ್ಯಾತ್ಮ ಗುರು ಶ್ರೀ ರವಿಶಂಕರ್ ಗುರೂಜಿ ಅವರು ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು


ನಂತರ ಸಭೆಯಲ್ಲಿ ಶ್ರೀಮಠದ ಗೌರವವನ್ನು ಸ್ವೀಕರಿಸಿ ಶ್ರೀಪಾದರ ಭಗವದ್ಗೀತಾ ಅಭಿಯಾನವನ್ನು ಮುಕ್ತವಾಗಿ ಪ್ರಶಂಸಿಸಿ ವಿಶ್ವ ಕಲ್ಯಾಣವನ್ನು ಹಾರೈಸಿದರು

ಪೂಜ್ಯ ಪರ್ಯಾಯ ಶ್ರೀಪಾದರು ಶ್ರೀ ರವಿಶಂಕರ್ ಗುರೂಜಿಯವರ ಸಾಧನೆ ಮತ್ತು ತಮ್ಮ ಆತ್ಮೀಯ ಸಂಬಂಧವನ್ನು ಸ್ಮರಿಸುತ್ತ ಅವರಿಂದ ಇನ್ನಷ್ಟು ಶಾಂತಿ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು
ಬಳಿಕ ಗೀತಾ ಮಂದಿರಕ್ಕೆ ಭೇಟಿ ನೀಡಿ ಗೀತಾರತಿಯನ್ನು ನೆರವೇರಿಸಿದರು
ಈ ಸಂದರ್ಭದಲ್ಲಿ ಪಟ್ಟದ ಕಿರಿಯ ಸ್ವಾಮೀಜಿಯವರಾದ ಸುಶೀಂದ್ರ ತೀರ್ಥ ಶ್ರೀಪಾದರು ಹಾಗೈ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಪ್ರಸನ್ನ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು

