228
ಅತಿರುದ್ರ ಮಹಾಯಾಗದಿಂದ ಸಮಾಜಕ್ಕೆ ಒಳ್ಳೆಯ ಫಲ
ಉಡುಪಿ:ಭಗವಂತನ ಪ್ರೇರಣೆಯಿಂದ ಮಣಿಪಾಲ ಪರಿಸರದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದಿಂದ ಸಮಾಜಕ್ಕೆ ಒಳ್ಳೆಯ ಫಲಗಳು ದೊರಕುತ್ತದೆ ಎಂದು ನಾಗಪಾತ್ರಿ ರಾಮಚಂದ್ರ ಕುಂಜಿತ್ತಾಯ ನುಡಿದರು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಧಾರ್ಮಿಕ ಸಭೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು
ಪತ್ರಕರ್ತ ಅಜಿತ್ ಹನುಮಕ್ಕನವರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು ವೇದಿಕೆಯಲ್ಲಿ ಯಾಗ ಸಮಿತಿಯ ಅಧ್ಯಕ್ಷ ಹಾಗೂ ಶಾಸಕರಾದ ರಘುಪತಿ ಭಟ್ ದೇವಸ್ಥಾನದ ಅಭಿವೃದ್ದಿ ಟ್ರಸ್ಟ್ ಅಧ್ಯಕ್ಷರಾದ ಮಹೇಶ್ ಠಾಕೂರ್ ದ.ಕ.ಮೀನುಗಾರರ ಫೆಡರೇಶನ್ ಅಧ್ಯಕ್ಷರಾದ ಯಶಪಾಲ್ ಎ ಸುವರ್ಣ ಉದ್ಯಮಿ ಬಾಲಕೃಷ್ಣ ಶೆಣೈ ಯಕ್ಷಗಾನ ಮೇಳಗಳ ಯಜಮಾನ ಪಿ ಕಿಶನ್ ಹೆಗ್ಡೆ ವಿಧಾನ ಪರಿಷತ್ ಮಾಜಿ ಸದಸ್ಯರಾದ ದಯಾನಂದ ರೆಡ್ಡಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ ಮುಂತಾದವರು ಉಪಸ್ಥಿತರಿದ್ದರು

