157
ಕುಂದಾಪುರ : ನಗರದ ಮುಖ್ಯ ರಸ್ತೆಯಲ್ಲಿರುವ ಸರಕಾರಿಕಾರಿ ಆಸ್ಪತ್ರೆ ಹಿಂಭಾಗದ ಶ್ರೀ ನಂದಿಕೇಶ್ವರ ದೇವಸ್ಥಾನದ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವವು ಇಂದು ಸೋಮವಾರ ದೇವಾಲಯದ ವಠಾರದಲ್ಲಿ ನಡೆಯಲಿದೆ
ಬೆಳಗ್ಗೆ ಶ್ರೀ ದೇವರಿಗೆ ಫಲ ಸಮರ್ಪಣೆ, ಗುರು ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ಪ್ರಧಾನ ಹೋಮ, ಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ, ಕಲಶಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಹಾಗೂ ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಜೇರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಯು.ರಾಧಾಕೃಷ್ಣ ತಿಳಿಸಿದ್ದಾರೆ

