ಮಂಗಳೂರು : ಈ ವರ್ಷದ ರಾಮನವಮಿಗೆ ವಿಶೇಷ ಮಹತ್ವವಿದೆ ಶತಶತಮಾನಗಳ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ಭವ್ಯ ನಿರ್ಮಾಣದ ಬಳಿಕ ಬರುತ್ತಿರುವ ಮೊದಲ ರಾಮನವಮಿಯಾಗಿದೆ. ಆದ್ದರಿಂದ ಪ್ರತೀ ಊರಲ್ಲಿ ರಾಮನವಮೀ ಉತ್ಸವವನ್ನು ವಿಶೇಷವಾಗಿ ಆಚರಿಸುವಂತೆ ರಾಮಜನ್ಮಭೂಮಿತೀರ್ಥಕ್ಷೇತ್ರ ಟ್ರಸ್ಟ್ ವಿಶ್ವಸ್ತರಾಗಿರುವ ಶ್ರೀಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ.
ಈ ಕುರಿತಾಗಿ ಎಪ್ರಿಲ್ 5 ರಂದು ಅಯೋಧ್ಯೆಯಲ್ಲಿ ನಡೆದ ಟ್ರಸ್ಟ್‌ನ ಸಭೆಯಲ್ಲೂ ಶ್ರೀಗಳು ಸೇರಿದಂತೆ ಎಲ್ಲ ಸದಸ್ಯರು ವಿವರವಾಗಿ ಚರ್ಚಿಸಿದ್ದಾರೆ. ಚುನಾವಣಾ ನೀತಿ ಸಂಹಿತೆಗೆ ತೊಂದರೆಯಾಗದಂತೆ ಪ್ರತೀ ಊರಲ್ಲಿರುವ ದೇವಸ್ಥಾನ ಭಜನಾ ಮಂದಿರ ಸಮುದಾಯ ಭವನಗಳಲ್ಲಿ ಭಜನೆ, ರಾಮತಾರಕ ಮಂತ್ರ ಜಪ ಯಜ್ಞ ಸಾಲುದೀಪ ಬೆಳಗುವುದು,ಮಕ್ಕಳಿಗಾಗಿ ರಾಮವೇಷ ಸ್ಪರ್ಧೆ, ರಾಮಾಯಣ ಆಧಾರಿತ ರಸಪ್ರಶ್ನೆಗಳನ್ನು ಎರ್ಪಡಿಸಲು ಅವರು ಕರೆ ನೀಡಿದ್ದಾರೆ