Home » ಇಂದು ನನಸಾಗಲಿರುವ ಹಿಂದುಗಳ ಶತಶತಮಾನದ ಕನಸು
 

ಇಂದು ನನಸಾಗಲಿರುವ ಹಿಂದುಗಳ ಶತಶತಮಾನದ ಕನಸು

by Kundapur Xpress
Spread the love

ಬೆಂಗಳೂರು : ರಾಮನ ಜನ್ಮಭೂಮಿ ಅಯೋಧೈಯಲ್ಲಿ ಭವ್ಯವಾದ ರಾಮಮಂದಿರ ಕಾಣುವ ಕೋಟ್ಯಂತರ ಹಿಂದೂಗಳ ನೂರಾರು ವರ್ಷಗಳ ತಪಸ್ಸು ಕೊನೆಗೂ ಫಲಕೊಡುವ ಸಮಯ ಸನ್ನಿಹಿತವಾಗಿದೆ. ಕೋಟ್ಯಂತರ ಭಾರತೀಯರ ತನು ಮನ ಧನದಿಂದ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಇಂದು ವೈಭವೋಪೇತವಾಗಿ ಜರುಗಲಿದ್ದು ಶತಶತಮಾನಗಳ ಹಿಂದುಗಳ ಕನಸು ನನಸಾಗಲಿದೆ

ಶ್ರೀ ಶೋಭಕೃತ್ ನಾಮ ಸಂವತ್ಸರ, ಹೇಮಂತ ಋತು, ಪುಷ್ಯ ಮಾಸ, ಶುಕ್ಲಪಕ್ಷ, ದ್ವಾದಶಿ, ಉತ್ತರಾಯಣ, ಮೃಗಶಿರಾ ನಕ್ಷತ್ರ, ಅಭಿಜಿತ್ ಲಗ್ನದ ಸಮಯವಾದ ಮಧ್ಯಾಹ್ನ 12.30ರ ವೇಳೆಗೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ 5 ವರ್ಷದ ಬಾಲ ರಾಮನನ್ನು ಪ್ರತಿನಿಧಿಸುವ ಸುಂದರ ವಿಗ್ರಹದ ಪ್ರಾಣಪ್ರತಿಷ್ಠಾಪನೆ ನೆರವೇರಲಿದೆ

ಪ್ರಧಾನಿ ನರೇಂದ್ರ ಮೋದಿ ಅವರು ಈ ಚಾರಿತ್ರಿಕ ಸಮಾರಂಭದ ಮುಖ್ಯ ಯಜಮಾನತ್ವ ವಹಿಸಲಿದ್ದು, ಅವರ ಜತೆ ಕರ್ನಾಟಕದ ಲಿಂಗರಾಜ ಬಸವರಾಜ ಅಪ್ಪಸೇರಿ 14 ದಂಪತಿಗಳು ಸಹ-ಯಜಮಾನತ್ವ ವಹಿಸಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಿದ್ದಾರೆ ನಾಳೆ ಮಂಗಳವಾರ ದೇಗುಲವನ್ನು ಸಾರ್ವಜನಿಕ ದರ್ಶನಕ್ಕೆ ತೆರೆಯಲಾಗುತ್ತದೆ

ಏನೇನು ಕಾರ್ಯಕ್ರಮ?: ‘ಪ್ರಾಣ ಪ್ರತಿಷ್ಟಾ’ ಸಮಾರಂಭವು ಕಾಶಿಯ ಗಣೇಶ್ವರ ಶಾಸ್ತ್ರಿ ದ್ರಾವಿಡ್ ಹಾಗೂ ಲಕ್ಷ್ಮೀಕಾಂತ ಶಾಸ್ತ್ರಿಗಳ ನೇತೃತ್ವದಲ್ಲಿ ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಲಿದ್ದು ಮಧ್ಯಾಹ್ನ 1.00 ಗಂಟೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಮೈಸೂರು ಮೂಲದ ಅರುಣ್ ಯೋಗಿರಾಜ್ ಅವರು ಕೆತ್ತಿರುವ 51 ಇಂಚಿನ ರಾಮಲಲ್ಲಾ ಮೂರ್ತಿಯನ್ನು ಗುರುವಾರ ದೇವಾಲಯದ ಗರ್ಭಗುಡಿಯಲ್ಲಿ ಇರಿಸಲಾಗಿತ್ತು. ಸಂಪ್ರದಾಯದಂತೆ ಮೂರ್ತಿಯ ಕಣ್ಣು ಮುಚ್ಚಿ ಇಡಲಾಗಿದ್ದು, ಪ್ರಾಣಪ್ರತಿಷ್ಠಾಪನೆ ವೇಳೆ ಆ ಬಟ್ಟೆ ತೆಗೆಯಲಾಗುತ್ತದೆ. ಈ ಮೂಲಕ ರಾಮನು ತನ್ನ ಮಂದಸ್ಮಿತ ಮುಖಾರವಿಂದದ ದರ್ಶನ ಮಾಡಿಸಲಿದ್ದಾನೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ತಮ್ಮ ಅಮೃತ ಹಸ್ತದಿಂದ ಪ್ರಾಣಪ್ರತಿಷ್ಠಾಪನೆ ನೆರವೇರಿಸಿ ಸಮಾರಂಭಕ್ಕೆ ಆಹ್ವಾನಿಸಲ್ಪಟ್ಟಿರುವ 7,000ಕ್ಕೂ ಹೆಚ್ಚು ಜನರು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ

   

Related Articles

error: Content is protected !!