ಕುಂದಾಪುರ: ನಗರದ ಚಿಕ್ಕನ್‌ಸಾಲ್ ರಸ್ತೆಯ ರೋಯಲ್ ಸಭಾಭವನದ ಹತ್ತಿರದ ಶ್ರೀನಾಗಬೊಬ್ಬರ್ಯ, ಹಾಯ್ಗುಳಿ ಹಾಗೂ ಪರಿವಾರ ದೇವಸ್ಥಾನದ ವರ್ಧಂತ್ಯೋತ್ಸವದ ದಶಮಾನೋತ್ಸವದ ಪ್ರಯುಕ್ತ ಏಪ್ರಿಲ್ 04 ರಂದು ಸಂಜೆ 5.30ಕ್ಕೆ ಶ್ರೀ ದೇವರಿಗೆ ಫಲ ಸಮರ್ಪಣೆ, ಗುರು ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹವಾಚನ, ಪ್ರಧಾನ ಹೋಮ, ಕಲಶ ಸ್ಥಾಪನೆ, ಬೊಬ್ಬರ್ಯ, ಹ್ಯಾಗುಳಿ ಮತ್ತು ಕೀಳು ದೇವರಿಗೆ ಕಲಾಭಿವೃದ್ಧಿ ಹೋಮ, ಕಲಶಾಭಿಷೇಕ, ಮಹಾಪೂಜೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆಯ ಧಾರ್ಮಿಕ ಕಾರ್ಯಕ್ರಮವು ಅರ್ಚಕ ಸೂರ್ಯನಾರಾಯಣ ಹೊಳ್ಳರವರ ನೇತೃತ್ವದಲ್ಲಿ ನಡೆಯಿತು
ರಾತ್ರಿ 8.00 ಕ್ಕೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ (ರಿ.) ಕೊಂಚಾಡಿ ಇವರಿಂದ ಕುಣಿತ ಭಜನೆ ಸಂಪನ್ನಗೊಂಡಿತು
ಇಂದು ಶನಿವಾರ ಬೆಳಿಗ್ಗೆ 9.00ಕ್ಕೆ ಶ್ರೀ ನಾಗದೇವರಿಗೆ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಪ್ರಧಾನ ಹೋಮ, ಮಹಾಪೂಜೆ, ನಾಗದೇವರ ದರ್ಶನ ನಡೆಯಲಿದೆ ಬೆಳಿಗ್ಗೆ 11.30ಕ್ಕೆ ಧರ್ಮಸ್ಥಳದ ಮೇಳದ ಗಣಪತಿ ದೇವರಿಗೆ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆ. ಮಧ್ಯಾಹ್ನ ಗಂಟೆ 12.00ಕ್ಕೆ ಪಲ್ಲಪೂಜೆ 12.30ಕ್ಕೆ ಮಹಾ ಮಂಗಳಾರತಿ, ತೀರ್ಥ-ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ 4.30ಕ್ಕೆ ಶ್ರೀ ಮೈಲಾರೇಶ್ವರ ಭಜನಾ ಮಂಡಳಿ ಮತ್ತು ಶ್ರೀ ಕಾಳಿಕಾಂಬಾ ಭಜನಾ ಮಂಡಳಿ ಕುಂದಾಪುರ ಇವರಿಂದ ಭಜನಾ ಕಾರ್ಯಕ್ರಮ. ಸಂಜೆ 6ಕ್ಕೆ ಸೇವಾ ಕರ್ತರಿಂದ ವಿಶೇಷ ರಂಗಪೂಜೆ ಹಾಗೂ ಪ್ರಸಾದ ವಿತರಣೆಯಾಗಲಿದ್ದು ರಾತ್ರಿ ಗಂಟೆ 7.00ರಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಎಂಬ ಯಕ್ಷಗಾನ ಪ್ರಸಂಗ ನಡೆಯಲಿದೆ

