ಕುಂದಾಪುರ : ನಗರದ ಮುಖ್ಯರಸ್ತೆಯ ಸರಕಾರಿ ಆಸ್ಪತ್ರೆಯ ಸಮೀಪದಲ್ಲಿರುವ ಶ್ರೀನಂದಿಕೇಶ್ವರ ದೇವಸ್ಥಾನವು ಸಂಪೂರ್ಣ ಶಿಲಾಮಯವಾಗಿ ಪುನರ್ ನಿರ್ಮಾಣಗೊಳ್ಳುತ್ತಿದ್ದು ಜೀರ್ಣೋದ್ಧಾರ ಕಾರ್ಯವು ಭರದಿಂದ ಸಾಗುತ್ತಿದೆ
ಶ್ರೀನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಡಾ.ನಾಗೇಶ್ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಯು.ರಾಧಕೃಷ್ಣರವರ ನೇತೃತ್ವದಲ್ಲಿ ಜೀರ್ಣೋದ್ಧಾರ ಕಾರ್ಯವು ವೇಗ ಪಡೆದುಕೊಂಡಿದ್ದು ಸುಮಾರು 70 ಲಕ್ಷ ರೂಪಾಯಿ ವೆಚ್ಚದಲ್ಲಿ ದೇವಸ್ಥಾನವು ಪುನರ್ ನವೀಕರಣಗೊಳ್ಳುತ್ತಿದೆ
ಶ್ರೀ ನಂದಿಕೇಶ್ವರ ದೇವಸ್ಥಾನಕ್ಕೆ 400 ವರ್ಷಗಳ ಇತಿಹಾಸವಿದ್ದು ನಗರದ ಚಿಕ್ಕಮ್ಮನಸಾಲು ರಸ್ತೆಯಲ್ಲಿರುವ ಶ್ರೀ ಮೈಲಾರೇಶ್ವರ ದೇವಸ್ಥಾನದ ಮುಂದೆ ಪ್ರತಿಷ್ಠಾಪನೆಗೊಂಡಿದ್ದ ನಂದಿಯನ್ನು ಯಾರೋ ಅಮಾಯಕರು ಅಪಹರಿಸಿ ಸರಕಾರಿ ಆಸ್ಪತ್ರೆಯ ಸಮೀಪದಲ್ಲಿ ಪ್ರತಿಷ್ಠಾಪಿಸಿದರು ಎಂಬ ಪ್ರತೀತಿ ಇದ್ದು ಮುಂದೆ ಶಿವಲಿಂಗದ ಪ್ರತಿಷ್ಠಾಪನೆಯೊಂದಿಗೆ ಭಕ್ತರಿಂದ ನಂದಿಕೇಶ್ವರನಾಗಿ ಆರಾಧಿಸಲ್ಪಟ್ಟಿತು ಶ್ರೀ ನಂದಿಕೇಶ್ವರ ದೇವಸ್ಥಾನಕ್ಕೆ ಬ್ರಿಟಿಷರ ಆಡಳಿತ ಅವಧಿಯಲ್ಲಿ 4.00 ಸೆಂಟ್ಸ್ ಜಾಗ ಕೂಡ ಮಂಜೂರಾಗಿತ್ತು