367
ಉಡುಪಿ : ಟಾಟಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಶ್ರೀಯುತ ರತನ್ ಟಾಟಾರವರ ನಿಧನಕ್ಕೆ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ
ಟಾಟಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಶ್ರೀಯುತ ರತನ್ ಟಾಟಾ ಅವರು ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಹ್ವಾನ ಮೇರೆಗೆ ಶ್ರೀಪುತ್ತಿಗೆ ಮೂಲಮಠದಲ್ಲಿರುವ ವಿದ್ಯಾಪೀಠಕ್ಕೆ ಭೇಟಿಕೊಟ್ಟು ಶ್ರೀ ನರಸಿಂಹ ಹಾಗೂ ಗಣಪತಿ ದೇವರ ದರ್ಶನಮಾಡಿ ನೂತನ ಸ್ವಾಗತ ಗೋಪುರ ಉದ್ಘಾಟನೆಮಾಡಿ ಶ್ರೀಗಳಿಂದ ಆಶೀರ್ವಾದ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು

