ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ನಡೆದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಹಾಗೂ ಪುರಸಭೆ ವ್ಯಾಪ್ತಿಯ ಸಮಿತಿಗಳ ಪೂರ್ವಭಾವಿ ಸಭೆಯಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನವದುರ್ಗಾ ಲೇಖನ ಯಜ್ಞದ ಕುರಿತು ಚರ್ಚಿಸಿ ಈ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಬಾಲಾಜಿ, ನವದುರ್ಗಾ ಲೇಖನ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಶ್ರೀ ಸಂದೀಪ್ ಕುಮಾರ್ ಮಂಜ, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸಮಿತಿ ಸದ್ಯಸರು ಉಪಸ್ಥಿತರಿದ್ದರು.