ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮೊತ್ತ ಮೊದಲ ಬಾರಿಗೆ “ಭಂಡಾರ್ಕಾರ್ಸ್ ಪ್ರೀಮಿಯರ್ ಲೀಗ್” (ಬಿಪಿಎಲ್) ಕ್ರಿಕೆಟ್ ಪಂದ್ಯಾಟ ಶುಭಾರಂಭಗೊಂಡಿತು ಐಪಿಎಲ್ ಮಾದರಿಯಲ್ಲಿ 150 ವಿದ್ಯಾರ್ಥಿ ಆಟಗಾರರನ್ನು 10 ತಂಡಗಳನ್ನಾಗಿ ರಚಿಸಿ 4 ಓವರ್ ಗಳ ಪಂದ್ಯಾಟವು 3 ದಿನಗಳ ಕಾಲ ನಡೆಯಲಿದೆ
ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ ಪ್ರಭು ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ಆಗಮಿಸಿದ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಮಾತನಾಡಿ ಕ್ರೀಡಾ ಮನೋಭಾವದಿಂದ ಆಡಬೇಕು ಅಂಪೈರ್ ತೀರ್ಮಾನವನ್ನು ಒಪ್ಪಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಿ ಆಡಬೇಕು ಎಂದು ಆಟಗಾರರಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ.ಗೊಂಡ, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯಕುಮಾರ್ ಕೆ.ಎಂ ಕಾಲೇಜಿನ ದೈಹಿಕ ನಿರ್ದೇಶಕರಾದ ಶಂಕರನಾರಾಯಣ ಉಪಸ್ಥಿತರಿದ್ದರು
ವಿದ್ಯಾರ್ಥಿನಿ ಖುಷಿ ನಿರೂಪಿಸಿದ ಕಾರ್ಯಕ್ರಮದಲ್ಲಿ. ಕಾಲೇಜಿನ ದೈಹಿಕ ನಿರ್ದೇಶಕರಾದ ಶಂಕರನಾರಾಯಣ ಸ್ವಾಗತಿಸಿ ಸವಿಶ್ರೀ ಪ್ರಾರ್ಥಿಸಿ ಪ್ರಮೀಳಾ ವಂದಿಸಿದರು.

