Home » ಶುಭಾರಂಭದ ನಿರೀಕ್ಷೆಯಲ್ಲಿ ಭಾರತ
 

ಶುಭಾರಂಭದ ನಿರೀಕ್ಷೆಯಲ್ಲಿ ಭಾರತ

ಇಂಡಿಯ ಬಾಂಗ್ಲಾ ಮುಖಾಮುಖಿ

by Kundapur Xpress
Spread the love

ದುಬೈ : 9ನೇ ಆವೃತ್ತಿಯ ಐಸಿಸಿ ಚಾಂಪಿಯನ್ಸ್  ಟೂರ್ನಿಯಲ್ಲಿ ಶುಭಾರಂಭ ನಿರೀಕ್ಷೆಯಲ್ಲಿರುವ ಭಾರತ ತಂಡ ಇಂದು ಗುರುವಾರ ಬಾಂಗ್ಲಾದೇಶ ವಿರುದ್ಧ ಸೆಣಸಾಡಲಿದೆ. ಪ್ರಮುಖ ವೇಗಿ ಜಸ್‌ಪ್ರೀತ್ ಬೂಮ್ರಾ ಅನುಪಸ್ಥಿತಿ ಹಾಗೂ ಆಟಗಾರರ ಆಯ್ಕೆ ಗೊಂದಲ ನಡುವೆ ಬಲಿಷ್ಠ ತಂಡ ಕಣಕ್ಕಿಳಿಸಿ ದೊಡ್ಡ ಗೆಲುವು ಸಾಧಿಸುವುದು ಭಾರತದ ಗುರಿ, ಪಂದ್ಯಕ್ಕೆ ದುಬೈ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಭಾರತ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದ್ದರೂ, ತಂಡದಲ್ಲಿ ಕೆಲ ಸಮಸ್ಯೆಗಳಿವೆ. ರೋಹಿತ್ ಶರ್ಮಾ ಫಾರ್ಮ್‌ಗೆ ಮರಳಿದ್ದರೂ, ವಿರಾಟ್ ಕೊಹ್ಲಿ ಬ್ಯಾಟ್ ಸದ್ದು ಮಾಡಲೇಬೇಕಾದ ಅಗತ್ಯವಿದೆ. ಶುಭಮನ್” ಗಿಲ್, ಶ್ರೇಯಸ್‌ ಅಯ್ಯರ್ ಅಭೂತಪೂರ್ವ ಲಯದಲ್ಲಿದ್ದು, ವಿಕೆಟ್ ಕೀಪರ್ ಬ್ಯಾಟರ್ ಕೆ. ಎಲ್.ರಾಹುಲ್ ಕೂಡಾ ಅಬ್ಬರಿಸಬೇಕಾಗಿದೆ. 

 

Related Articles

error: Content is protected !!