136
ನಾಗುರ : ರವೀಂದ್ರ ಜಡೇಜಾ, ಹರ್ಷಿತ್ ರಾಣಾ ಮಾರಕ ದಾಳಿ ಬಳಿಕ ಶುಭನಮ್ ಗಿಲ್, ಶ್ರೇಯಸ್ ಅಯ್ಯರ್ ಹಾಗೂ ಅಕ್ಷರ್ ಪಟೇಲ್‌ರ ಮನಮೋಹಕ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಇಂಗ್ಲೆಂಡ್ ವಿರುದ್ಧ ನಾಗುರ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ ಸುಲಭ ಗೆಲುವು, ದಾಖಲಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿ ಯಲ್ಲಿ 1-0 ಮುನ್ನಡೆ ಪಡೆದಿದೆ.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆರಂಭದಲ್ಲಿ ಅವರ ನಿರ್ಧಾರ ಸರಿ ಎನಿಸಿದರೂ, ದೊಡ್ಡ ಮೊತ್ತ ಕಲೆಹಾಕಲು ಭಾರತದ ಬೌಲರ್‌ಗಳು ಬಿಡಲಿಲ್ಲ. ತಂಡ 47.4 ಓವರ್‌ಗಳಲ್ಲಿ 248 ರನ್ ಗೆ ಇನ್ನಿಂಗ್ಸ್ ಕೊನೆಗೊಳಿಸಿತು ಈ ಮೊತ್ತ ಭಾರತಕ್ಕೆ ಸುಲಭ ತುತ್ತಾಯಿತು. ಇಂಗ್ಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಭಾರತೀಯ ಬ್ಯಾಟರ್ಸ್ ತಂಡವನ್ನು ಕೇವಲ 38.4 ಓವರ್‌ಗಳಲ್ಲೇ ಗೆಲ್ಲಿಸಿದರು.

