ಬೆಂಗಳೂರು : ಕರ್ನಾಟಕ ಕ್ರಿಕೆಟ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ವಿಮಾನದಲ್ಲಿ ತಮ್ಮ ಆಸನದ ಮುಂದೆ ಪೌಚ್ನಲ್ಲಿದ್ದ ಜ್ಯೂಸ್ ಕುಡಿದು ಅಸ್ವಸ್ಥರಾದ ಘಟನೆ ಮಂಗಳವಾರ ನಡೆದಿದೆ.
ಸೋಮವಾರ ತ್ರಿಪುರಾ ವಿರುದ್ಧದ ರಣಜಿ ಪಂದ್ಯವನ್ನು ಗೆದ್ದ ಬಳಿಕ, ಮಂಗಳವಾರ ಮಧ್ಯಾಹ್ನ ರಾಜ್ಯ ತಂಡವು ತನ್ನ ಮುಂದಿನ ಪಂದ್ಯವನ್ನಾಡಲು ನವದೆಹಲಿ ಮಾರ್ಗವಾಗಿ ಸೂರತ್ ತೆರಳುತಿತ್ತು. ಈ ವೇಳೆ ಇಂಡಿಗೋ ವಿಮಾನದಲ್ಲಿ ದ್ರವ ಪದಾರ್ಥವನ್ನು ಸೇವಿಸುತ್ತಿದ್ದಂತೆ ಮಯಾಂಕ್ಗೆ ಹೊಟ್ಟೆ ನೋವು ಶುರುವಾಗಿದ್ದು, ತುಟಿಗಳು ಊದಿಕೊಂಡಿವೆ. ಅವರು ಎರಡು ಬಾರಿ ವಾಂತಿ ಸಹ ಮಾಡಿಕೊಂಡಿದ್ದಾರೆ.
ಕೂಡಲೇ ಮಯಾಂಕ್ರನ್ನು ವಿಮಾನ ದಿಂದ ಕೆಳಗಿಳಿಸಿ ಖಾಸಗಿ ಆಸತ್ರೆಗೆ ಕರೆದೊಯ್ಯಲಾಯಿತು. ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಯಿತು. ಅವರಿಗೆ ಯಾವುದೇ ಅಪಾಯವಿಲ್ಲ ಎಂದು ತಿಳಿದು ಬಂದಿದ್ದು, ಬುಧವಾರ ಬೆಂಗಳೂರಿಗೆ ಬರಲಿದ್ದಾರೆ. ಮಯಾಂಕ್ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಲಾಗುತ್ತಿದೆ