112
ಚೆನ್ನೈ : ಐಪಿಎಲ್‌ಗೆ ಕೆಲವೇ ದಿನಗಳು ಉಳಿದಂತೆ ಚೆನ್ನೆ ಸೂಪರ್ ಕಿಂಗ್ಸ್ ತಂಡದ ಮುಖ್ಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಚೆನ್ನೈಗೆ ಆಗಮಿಸಿದ್ದು ಟೂರ್ನಿ ಪೂರ್ವ ನಡೆಯುವ ಕ್ಯಾಂಪಿಗೆ ಸೇರಿಕೊಂಡಿದ್ದಾರೆ
ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ನಂತರವೇ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಎಲ್ಲ ಸಿದ್ಧತೆಗಳೂ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ಕ್ರಿಕೆಟಿಗರನ್ನು ಬಿಟ್ಟು ಉಳಿದ ಆಟಗಾರರು ಅಭ್ಯಾಸದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಚೆನ್ನೈ ತಂಡದ ಪ್ರಮುಖ ಆಟಗಾರ ಮತ್ತು ಮಾಜಿ ನಾಯಕ ಧೋನಿ ಚೆನ್ನೈಗೆ ಬಂದಿದ್ದು, ಚೆನ್ನೈನ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಚೆನ್ನೈ ಧೋನಿ ಚೆನ್ನೈಗೆ ಆಗಮಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ

