203
ಉಡುಪಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆದ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಸಕಲೇಶಪುರ ಶಾಸಕ ಹಾಗೂ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ವಿಧಾನ ಪರಿಷತ್ ಸದಸ್ಯ ಡಾ! ಧನಂಜಯ ಸರ್ಜಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ ಹಾಗೂ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು.

