Home » ಇಂದಿನಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ
 

ಇಂದಿನಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ

by Kundapur Xpress
Spread the love

ಕರಾಚಿ : ಬಹು ನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ (ಏಕದಿನ ಮಾದರಿ)ಯ 9ನೇ ಆವೃತ್ತಿಗೆ ಇಂದು ಬುಧವಾರ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಪಾಕಿಸ್ತಾನ ತಂಡ ಮಾಜಿ ಚಾಂಪಿಯನ್ ನ್ಯೂಜಿಲೆಂಡ್ ವಿರುದ್ಧ ಸೆಣಸಾಡಲಿದೆ. ಪಂದ್ಯಕ್ಕೆ ಕರಾಚಿಯ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಟೂರ್ನಿಯಲ್ಲಿ ಈ ಬಾರಿ ಒಟ್ಟು 8 ತಂಡಗಳು ಪಾಲ್ಗೊಳ್ಳಲಿವೆ. ಬಿಸಿಸಿಐ ಹಾಗೂ ಐಸಿಸಿ ಜೊತೆ ತಿಕ್ಕಾಟ ನಡೆಸಿ ಟೂರ್ನಿಯ ಆತಿಥ್ಯ ಹಕ್ಕನ್ನು ತನ್ನಲ್ಲೇ ಉಳಿಸಿಕೊಂಡಿರುವ ಪಾಕ್ ತವರಿನ ಅಂಗಳದಲ್ಲಿ ಟ್ರೋಫಿ ಗೆಲ್ಲುವ ಫೇವರಿಟ್ ಎನಿಸಿಕೊಂಡೇ ಟೂರ್ನಿಗೆ ಕಾಲಿಡಲಿದೆ. ಆದರೆ ನ್ಯೂಜಿಲೆಂಡ್ ತಂಡ ಇತ್ತೀಚೆಗಷ್ಟೇ ಪಾಕ್‌ನಲ್ಲಿ ನಡೆದ ತ್ರಿಕೋನ ಸರಣಿ ಗೆದ್ದಿದ್ದು ತುಂಬು ಆತ್ಮವಿಶ್ವಾಸದೊಂದಿಗೆ ಅಭಿಯಾನ ಆರಂಭಿಸಲಿದೆ.

 

Related Articles

error: Content is protected !!