63
ನವದೆಹಲಿ : ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಟಿ-20 ಕ್ರಿಕೆಟ್ ಪಂದ್ಯಕ್ಕೆ ಕೇಂದ್ರ ಸರ್ಕಾರ ಬುಧವಾರ ಹಸಿರು ನಿಶಾನೆ ತೋರಿದೆ. ಸೆ.14ರಂದು ಉಭಯ ತಂಡಗಳು ದುಬೈನಲ್ಲಿ ಸೆಣಸಲಿವೆ. ಆದರೆ ಕ್ರಿಕೆಟ್ ಸೇರಿ ಯಾವುದೇ ಕ್ರೀಡೆಯಲ್ಲಿ ಎರಡೂ ದೇಶಗಳ ನಡುವೆ ದ್ವಿಪಕ್ಷೀಯ ಸರಣಿ ನಡೆಯುವುದಿಲ್ಲ ಎಂದು ಕ್ರೀಡಾ ಸಚಿವಾಲಯ ಸ್ಪಷ್ಟಪಡಿಸಿದೆ.
ಇತ್ತೀಚೆಗೆ ಪಹಲ್ಯಾಮ್‌ನಲ್ಲಿ ಉಗ್ರರು ನಡೆಸಿದ ಭೀಕರ ಹತ್ಯಾಕಾಂಡ ಬಳಿಕ ಭಾರತ ತಂಡ ಪಾಕ್ ವಿರುದ್ಧ ಕ್ರಿಕೆಟ್ ಆಡುವ ಬಗ್ಗೆ ಭಾರೀ ಚರ್ಚೆಯಾಗಿತ್ತು. ಈ ನಡುವೆ ಲೆಜೆಂಡ್ಸ್ ಕ್ರಿಕೆಟ್ ಲೀಗ್ ನಲ್ಲಿ ಭಾರತ ತಂಡ ಪಾಕ್ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿತ್ತು

