Home » ಇಂದು ಆರ್‌ ಸಿ ಬಿ ಮತ್ತು ಕೆ ಕೆ ಆರ್‌ ಬಿಗ್‌ ಫೈಟ್
 

ಇಂದು ಆರ್‌ ಸಿ ಬಿ ಮತ್ತು ಕೆ ಕೆ ಆರ್‌ ಬಿಗ್‌ ಫೈಟ್

ಪಂದ್ಯಕ್ಕೆ ಮಳೆ ಅಡ್ಡಿ ಸಂಭವ

by Kundapur Xpress
Spread the love

ಬೆಂಗಳೂರು : ಭಾರತ ಹಾಗೂ ಪಾಕಿಸ್ತಾನ ನಡುವಿನ ಯುದ್ದ ಪರಿಸ್ಥಿತಿಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್, ಶೆನಿವಾರದಿಂದ ಪುನಾರಂಭಗೊಳ್ಳಲಿದೆ.

ಶನಿವಾರ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ದ ಸೆಣಸಲಿದೆ. ಈ ಆವೃತ್ತಿಯ ಉದ್ಘಾಟನಾ ಪಂದ್ಯವೂ ಈ ಎರಡು ತಂಡಗಳ ನಡುವೆಯೇ ನಡೆದಿತ್ತು. ಇದೀಗ ಪುನಾರಂಭವೂ ಆರ್ ಸಿಬಿ-ಕೆಕೆಆರ್ ಮುಖಾಮುಖಿಯೊಂದಿಗೇ ಆಗಲಿದೆ.

ಆರ್‌ಸಿಬಿ ಈ ಪಂದ್ಯ ಗೆದ್ದರೆ, ಪ್ಲೇ-ಆಫ್‌ಗೆ ಅಧಿಕೃತವಾಗಿ ಪ್ರವೇಶಿಸಲಿದ್ದು, ಕೆಕೆಆ‌ರ್ ಸೋಲುಂಡರೆ ಟೂರ್ನಿಯಿಂದ ಹೊರಬೀಳಲಿದೆ. ಟೆಸ್ಟ್ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ಬಳಿಕ ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ಪಂದ್ಯವಾಡಲಿದ್ದು, ಅವರ ಮೇಲೆ ಎಲ್ಲರ ಕಣ್ಣಿದೆ.

ಇನ್ನು, ಚೆನ್ನೈ ವಿರುದ್ಧದ ಪಂದ್ಯದ ವೇಳೆ ಕೈಬೆರಳಿನ ಗಾಯಕ್ಕೆ ತುತ್ತಾಗಿದ್ದ ನಾಯಕ ರಜತ್ ಪಾಟೀದಾ‌ರ್ ಚೇತರಿಸಿಕೊಂಡಿದ್ದು, ಈ ಪಂದ್ಯದಲ್ಲಿ ಆಡುವುದು ಬಹುತೇಕ ಖಚಿತ. ಆದರೆ ಕಳೆದ 5 ಪಂದ್ಯಗಳಲ್ಲಿ ಅವರ ಬ್ಯಾಟ್‌ನಿಂದ ದೊಡ್ಡ ಇನ್ನಿಂಗ್ಸ್ ಮೂಡಿಬಂದಿಲ್ಲ.ಜೋಶ್ ಹೇಜಲ್‌ವುಡ್ ಅನುಪಸ್ಥಿತಿ ಆರ್‌ಸಿಬಿಗೆ ಕಾಡಲಿದೆ

 

Related Articles

error: Content is protected !!