75
ಅಹಮದಾಬಾದ್ : ಬಹುನಿರೀಕ್ಷಿತ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಹಣಾಹಣಿಗೆ ವೇದಿಕೆ ಸಜ್ಜುಗೊಂಡಿದೆ. ಈ ಬಾರಿ ಚುಟುಕು ಕ್ರಿಕೆಟ್ ಲೀಗ್ ಕಿರೀಟ ತೊಡುವವರು ಯಾರು ಎಂಬ ಕುತೂಹಲಕ್ಕೆ ಮಂಗಳವಾರ ತೆರೆ ಬೀಳಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡಲಿದ್ದು, ರಣರೋಚಕ ಪೈಪೋಟಿ ನಿರೀಕ್ಷಿಸಲಾಗಿದೆ.
ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿರುವ ರಜತ್ ಪಾಟೀದಾರ್ ನಾಯಕತ್ವದ ಆರ್‌ಸಿಬಿ, ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿತ್ತು. ಕ್ವಾಲಿಫೈಯರ್-1ರಲ್ಲಿ ಪಂಜಾಬ್ ವಿರುದ್ಧವೇ ಗೆದ್ದು ನೇರವಾಗಿ ಫೈನಲ್‌ಗೇರಿತ್ತು. ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದ್ದ ಶ್ರೇಯಸ್‌ಅಯ್ಯರ್ ಸಾರಥ್ಯದ ಪಂಜಾಬ್, ಆರ್‌ಸಿಬಿ ವಿರುದ್ಧಸೋಲಿನ ಬಳಿಕ ಕ್ವಾಲಿಫೈಯರ್-2ರಲ್ಲಿ ಮುಂಬೈನ ಸೋಲಿಸಿ ಪ್ರಶಸ್ತಿ ಸುತ್ತು ಪ್ರವೇಶಿಸಿದೆ

