Home » ಕದನ ವಿರಾಮ ಬಳಿಕ ಐಪಿಎಲ್‌ ಕದನ….?
 

ಕದನ ವಿರಾಮ ಬಳಿಕ ಐಪಿಎಲ್‌ ಕದನ….?

by Kundapur Xpress
Spread the love

ನವದೆಹಲಿ : ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಸ್ಥಗಿತಗೊಳಿಸಲಾಗಿದ್ದ ಐಪಿಎಲ್ ಪಂದ್ಯಗಳನ್ನು ಪುನಾರಂಭಿಸಲು ಬಿಸಿಸಿಐ ಸಿದ್ಧತೆ ಆರಂಭಿಸಿದೆ. ಪಂದ್ಯಗಳು ಆಯಾಯ ನಗರಗಳಲ್ಲೇ ನಡೆಯುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಗುರುವಾರ ಡೆಲ್ಲಿ-ಪಂಜಾಬ್ ನಡುವಿನ ಪಂದ್ಯ ಅರ್ಧಕ್ಕೇ ಸ್ಥಗಿತಗೊಂಡ ಬಳಿಕ ಶುಕ್ರವಾರ ಇಡೀ ಟೂರ್ನಿಯನ್ನೇ ಮೊಟಕುಗೊಳಿಸಲಾಗಿತ್ತು. ಆಟಗಾರರು, ಪ್ರೇಕ್ಷಕರ ಸುರಕ್ಷತೆ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಸದ್ಯ ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದ್ದರಿಂದ ಟೂರ್ನಿ ಪುನಾರಂಭಿಸಲು ಬಿಸಿಸಿಐ ಕಾಯುತ್ತಿದೆ.

ಉತ್ತರ ಭಾರತದ ಬಹುತೇಕ ಕ್ರೀಡಾಂಗಣಗಳು ಪಾಕಿಸ್ತಾನದ ಗಡಿ ಭಾಗ ಅಥವಾ ಅದರ ಹತ್ತಿರದಲ್ಲೇ ಇರುವುದರಿಂದ ಐಪಿಎಲ್ ಪಂದ್ಯಗಳನ್ನು ದಕ್ಷಿಣ ಭಾರತದ ನಗರಗಳಿಗೆ ಸ್ಥಳಾಂತರಿಸುವುದು ಬಿಸಿಸಿಐ ಮುಂದಿರುವ ಆಯ್ಕೆಗಳಲ್ಲಿ ಒಂದಾಗಿತ್ತು. ಆದರೆ ಕದನ ವಿರಾಮ ಜಾರಿಗೊಂಡಿದ್ದರಿಂದ ಗಡಿಗೆ ತೀರಾ ಹತ್ತಿರದಲ್ಲಿರುವ ಧರ್ಮಶಾಲಾ(ಹಿಮಾಚಲ ಪ್ರದೇಶ) ಹೊರತುಪಡಿಸಿ ‘ದೇಶದ ಇತರ 12 ಕ್ರೀಡಾಂಗಣಗಳಲ್ಲೂ ಪಂದ್ಯಗಳನ್ನು ಪುನಾರಂಭಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

 

Related Articles

error: Content is protected !!