Home » ಇಂದಿನಿಂದ ಐಪಿಎಲ್‌ ಹವಾ…..
 

ಇಂದಿನಿಂದ ಐಪಿಎಲ್‌ ಹವಾ…..

ಆರ್‌ ಸಿ ಬಿ - ಕೆ ಕೆ ಆರ್‌ ಸೆಣಸಾಟ ಪಂದ್ಯ ಸಂಜೆ 7.30ಕ್ಕೆ

by Kundapur Xpress
Spread the love

ಕೋಲ್ಕತಾ : ಅದು 2008ರ ಚೊಚ್ಚಲ ಆವೃತ್ತಿ ಐಪಿಎಲ್‌ನ ಉದ್ಘಾಟನಾ ಪಂದ್ಯ. ಬ್ರೆಂಡನ್ ಮೆಕಲಮ್‌ರ ಸ್ಪೋಟಕ 158 ರನ್ ನೆರವಿನಿಂದ ಆರ್‌ಸಿಬಿ ವಿರುದ್ಧ ಕೋಲ್ಕತಾ 140 ರನ್ ಭರ್ಜರಿ ಗೆಲುವು ಸಾಧಿಸಿತ್ತು ಅದಾಗಿ 17 ವರ್ಷ ಕಳೆದಿದೆ. ಕೆಕೆಆರ್ 3 ಬಾರಿ ಚಾಂಪಿಯನ್ ಆಗಿದ್ದರೆ, ಆರ್ ಸಿಬಿ ಇನ್ನೂ ಮೊದಲ ಕಪ್‌ಗಾಗಿ ಕನವರಿಸುತ್ತಿದೆ.

ಬರೋಬ್ಬರಿ 17 ವರ್ಷಗಳ ಬಳಿಕ ಮತ್ತೊಮ್ಮೆ ಆರ್‌ಸಿಬಿ ಹಾಗೂ ಕೆಕೆಆರ್ ತಂಡಗಳು ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. 18ನೇ ಆವೃತ್ತಿ ಟೂರ್ನಿಯ ಮೊದಲ ಪಂದ್ಯ ಶನಿವಾರ ನಡೆಯಲಿದ್ದು, ಈಡನ್ ಗಾರ್ಡನ್ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಈ ಬಾರಿ ಟೂರ್ನಿಯಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ಎರಡೂ ಬಲಿಷ್ಠ ತಂಡಗಳು. ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ಕೆಕೆಆರ್ ತವರಿನ ಕ್ರೀಡಾಂಗಣದ ಲಾಭವೆತ್ತುವ ಜೊತೆಗೆ ಆರ್‌ಸಿಬಿ ವಿರುದ್ಧ ಗೆಲುವಿನ ದಾಖಲೆಯನ್ನು ಮತ್ತಷ್ಟು ಉತ್ತಮಗೊಳಿಸುವ ನಿರೀಕ್ಷೆಯಲ್ಲಿದೆ. ಅತ್ತ ಯುವ ಬ್ಯಾಟರ್ ರಜತ್ ಪಾಟೀದಾರ್‌ಗೆ ನಾಯಕತ್ವ ವಹಿಸಿರುವ ಆರ್ ಸಿಬಿ, ಚೊಚ್ಚಲ ಕಪ್ ಗೆಲುವಿನ ವಿಶ್ವಾಸದಲ್ಲಿದೆ.

 

Related Articles

error: Content is protected !!