Home » ಐಪಿಎಲ್ ಸ್ಥಗಿತ ಸಾಧ್ಯತೆ : ಇಂದು ಬಿಸಿಸಿಐ ನಿರ್ಧಾರ ?
 

ಐಪಿಎಲ್ ಸ್ಥಗಿತ ಸಾಧ್ಯತೆ : ಇಂದು ಬಿಸಿಸಿಐ ನಿರ್ಧಾರ ?

by Kundapur Xpress
Spread the love

ನವದೆಹಲಿ : ಭಾರತ-ಪಾಕ್ ನಡುವೆ ಯುದ್ಧ ಪರಿಸ್ಥಿತಿ ಉಂಟಾಗಿರುವ ಕಾರಣ ಐಪಿಎಲ್ ಪಂದ್ಯಗಳನ್ನು ಮುಂದುವರಿಸಬೇಕೇ ಬೇಡವೇ ಎಂಬುದರ ಬಗ್ಗೆ ಬಿಸಿಸಿಐ ಇಂದು ಶುಕ್ರವಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಈಗಾಗಲೇ ಬಿಸಿಸಿಐ ಅಧಿಕಾರಿಗಳು ತುರ್ತು ಸಭೆ ಕರೆದಿದ್ದು, ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಭದ್ರತೆ ಕಾರಣಕ್ಕೆ ಗುರುವಾರದ ಪಂದ್ಯವನ್ನು ಅರ್ಧಕ್ಕೇ ಸ್ಥಗಿತಗೊಳಿಸಲಾಗಿದೆ. ಮುಂದುವರಿಸುವ ಬಗ್ಗೆ ನಾವು ಶುಕ್ರವಾರ ನಿರ್ಧಾರ ಕೈಗೊಳ್ಳಲಿದ್ದೇವೆ. ಸದ್ಯದ ಮಟ್ಟಿಗೆ, ಆಟಗಾರರ ಭದ್ರತೆಯೇ ನಮ್ಮ ಮೊದಲ ಆದ್ಯತೆ’ ಎಂದು ತಿಳಿಸಿದ್ದಾರೆ.

ಸಾಮಾಜಿಕ ತಾಣಗಳಲ್ಲೂ ಕ್ರೀಡಾಪ್ರೇಮಿಗಳು ಐಪಿಎಲ್ ಸ್ಥಗಿತಗೊಳಿಸಲು ಒತ್ತಾಯಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಐಪಿಎಲ್‌ ನಡೆಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

Related Articles

error: Content is protected !!