ಬೆಂಗಳೂರು : ಖೋ ಖೋ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿದ್ದ ಕರ್ನಾಟಕದ ಎಂ.ಕೆ ಗೌತಮ್ ಮತ್ತು ಚೈತ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದ 5 ಲಕ್ಷ ಬಹುಮಾನವನ್ನು ತಿರಸ್ಕರಿಸುವುದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ
ಶನಿವಾರ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಚೈತ್ರಾ ಹಾಗೂ ಗೌತಮ್ ಮಾತನಾಡಿ, ಖೋ ಖೋ ಆಟಕ್ಕೆ ನಮ್ಮ ಸರ್ಕಾರದ ಕಡೆಯಿಂದ ಸರಿಯಾಗಿ ಅನುದಾನ ಸಿಗುತ್ತಿಲ್ಲ ನಾವು ಮೊದಲ ಬಾರಿಗೆ ವಿಶ್ವಕಪ್ ಗೆದ್ದು ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕೇವಲ 5 ಲಕ್ಷ ಬಹುಮಾನವನ್ನು ಘೋಷಿಸಿದ್ದಾರೆ. ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಆಟಗಾರರಿಗೆ ದೊಡ್ಡ ಮೊತ್ತ ಘೋಷಿಸುವುದರ ಜೊತೆಗೆ, ‘ಎ’ ದರ್ಜೆ ಸರ್ಕಾರಿ ಹುದ್ದೆ ನೀಡುವ ಭರವಸೆಯನ್ನೂ ನೀಡಲಾಗಿದೆ. ಆದರೆ ನಮಗೆ ಆ ರೀತಿಯ ಯಾವ ಸವಲತ್ತನ್ನೂ ಕೊಡುವುದಾಗಿ ತಿಳಿಸದೆ ಇರುವುದು ತೀವ್ರ ಬೇಸರ ಮೂಡಿಸಿದೆ’ ಎಂದರು.
ರಾಜ್ಯ ಖೋ ಖೋ ಸಂಸ್ಥೆಯ ಅಧ್ಯಕ್ಷ ಶ್ರೀ ಲೋಕೇಶ್ವರ್ ಮಾತನಾಡಿ, ಸರ್ಕಾರ ರಾಜ್ಯದ ಕ್ರೀಡಾ ನೀತಿಯನ್ನು ಬದಲಾಯಿಸಬೇಕು. ಕ್ರೀಡೆಗಳಿಗೆ ಸರಿಯಾದ ಅನುದಾನ ಜಾರಿಗೊಳಿಸಬೇಕು. ಉನ್ನತ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳಿಗೆ ಅರ್ಹತೆ ತಕ್ಕಂತೆ ಹುದ್ದೆ ನೀಡಬೇಕು5 ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದರು.