173
ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2023 ನೇ ಸಾಲಿನ ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರರಾಗಿ ಸಾಧನೆ ಮಾಡಿರುವ ರಾಜ್ಯದ ಹಿರಿಯ ಕ್ರೀಡಾಪಟುಗಳು ಹಾಗೂ ತರಬೇತುದಾರರಿಂದ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಪೊರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನ. ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ .:0820-2521324, 9480886467 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.”

