ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 2 ಕಂಚಿನ ಪದಕ ಗೆದ್ದ ಭಾರತದ ಮನು ಭಾಕರ್, ಗುರುವಾರ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿಯಾದರು. ಈ ವೇಳೆ ಅವರನ್ನು ಸನ್ಮಾನಿಸಿದ ಸಚಿವರು, ಸರ್ಕಾರದ ವತಿಯಿಂದ 30 ಲಕ್ಷ ರು. ಚೆಕ್ ವಿತರಿಸಿದರು. ಮನು ಗುರುವಾರ ಕೇಂದ್ರ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ರನ್ನೂ ಭೇಟಿ ಮಾಡಿ, ಒಲಿಂಪಿಕ್ಸ್ನಲ್ಲಿನ ತಮ್ಮ ಅನುಭವ ಹಂಚಿಕೊಂಡರು.