ಮೆಲ್ಬರ್ನ್: ತಮ್ಮ ಆಕ್ರಮಣಕಾರಿ ಬೌಲಿಂಗ್ ದಾಳಿಯ ನೆರವಿನಿಂದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಇಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟೋಫಿ ಸರಣಿಯ ನಾಲ್ಕನೇ ಪಂದ್ಯವನ್ನು ಗೆಲ್ಲಿಸಿದರು. ಮೊದಲ ಪಂದ್ಯ ಸೋಲಿನ ನಂತರ ಭರ್ಜರಿ ಪ್ರದರ್ಶನ ನೀಡುತ್ತಿರುವ ಆಸ್ಟ್ರೇಲಿಯಾ ಈ ಗೆಲುವಿನೊಂದಿಗೆ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದೆ. ನಾಲ್ಕನೇ ಪಂದ್ಯವು ಸಿಡ್ನಿಯಲ್ಲಿ ನಡೆಯಲಿದ್ದು ಭಾರತಕ್ಕೆ ನಿರ್ಣಾಯಕ ಪಂದ್ಯ ಎನಿಸಲಿದೆ
ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಭಾರತವನ್ನು ಅಲ್ಪ ಮೊತ್ತಕ್ಕೆ ಕೆಟ್ಟಿ ಹಾಕಿತ್ತು. ಅದಾಗ್ಯೂ ನಿತೀಶ್ ಕುಮಾರ್ ರೆಡ್ಡಿ ಬ್ಯಾಟಿಂಗ್ ನಿಂದಾಗಿ ಭಾರತ ತಂಡವು ಉತ್ತಮ ಸ್ಥಿತಿಗೆ ಬಂದಿತ್ತು. ಎರಡನೇ ‘ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 234ರನ್ ಗಳಿಸಿ ಸರ್ವಪತನ ಕಂಡಿತು. ಈ ಬಳಿಕ ಬ್ಯಾಟಿಂಗ್ ಮಾಡಿದ ಭಾರತ ಮತ್ತೊಮ್ಮೆ ಬ್ಯಾಟಿಂಗ್ ಕುಸಿತ ಕಂಡು 155 ರನ್ ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದಿದ್ದ ಕಮಿನ್ಸ್ ಎರಡನೇ ಇನ್ನಿಂಗ್ಸ್ ನಲ್ಲೂ ಮೂರು ವಿಕೆಟ್ ಪಡೆದರು. ಇದರೊಂದಿಗೆ ಪಂದ್ಯಶ್ರೇಷ್ಠ ಆಟಗಾರ ಎನ್ನಿಸಿದರು.