Home » ರೆಸ್ಟ್ಲಿಂಗ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
 

ರೆಸ್ಟ್ಲಿಂಗ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

by Kundapur Xpress
Spread the love

ಕೋಟ : ಜನತಾ ಪಿ,ಯು ಕಾಲೇಜು ಹೆಮ್ಮಾಡಿ ಕುಂದಾಪುರ ಇಲ್ಲಿ ನಡೆದ ಜಿಲ್ಲಾಮಟ್ಟದ ರೆಸ್ಟ್ಲಿಂಗ್ ಸ್ಪರ್ಧೆಯಲ್ಲಿ ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.ವಿಶೇಷವಾಗಿ 74 ಕೆಜಿ ಫ್ರೀ ಸ್ಟೈಲ್ ವಿಭಾಗದಲ್ಲಿ ರಿತೇಶ್ ಬಾಯರಿ ಮತ್ತು 67 ಕೆಜಿ ಗ್ರೀಕ್ ರೋಮೆನ್ ವಿಭಾಗದಲ್ಲಿ ವರುಣ್ ಇವರು ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಗಳಿಸಿ ಉಡುಪಿ ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ.ಇವರಿಗೆ ಕೋಟ ವಿದ್ಯಾ ಸಂಘ ಇದರ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಸಿಬ್ಬಂದಿ ವರ್ಗ ಅಭಿನಂದಿಸಿದೆ.

   

Related Articles

error: Content is protected !!