ಬೆಂಗಳೂರು : ಬಹುನಿರೀಕ್ಷಿತ 2ನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ದು ಶುಕ್ರವಾರ ಚಾಲನೆ ಗೆ ಸಿಗಲಿದ್ದು ಇನ್ನು 11 ದಿನಗಳ ಕಾಲ ಬೆಂಗಳೂರಿನಲ್ಲಿ ಮಹಿಳಾ ಐಪಿಎಲ್ ರಂಗೇರಲಿದೆ. ಕಳೆದ ಬಾರಿ ಮುಂಬೈನಲ್ಲೇ ಎಲ್ಲಾ ಪಂದ್ಯಗಳನ್ನು ನಡೆಸಲಾಗಿದ್ದು, ಈ ಬಾರಿ ಟೂರ್ನಿಯನ್ನು 2 ನಗರಗಳಲ್ಲಿ ಆಯೋಜಿಸಲಾಗುತ್ತಿದೆ. ಬೆಂಗಳೂರಿನಲ್ಲಿ 11 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿ ಇನ್ನುಳಿದ 11 ಪಂದ್ಯಗಳಿಗೆ ನವದೆಹಲಿ ಆತಿಥ್ಯ ವಹಿಸಲಿದೆ.
ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದಂತೆ 5 ತಂಡಗಳು ಪಾಲ್ಗೊಳ್ಳಲಿವೆ. ಕಳೆದ ಬಾರಿ ಫೈನಲ್ಗೇರಿದ್ದ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಇಂದು ಮುಖಾಮುಖಿಯಾಗಲಿವೆ.