ದುಬೈ : ಚೊಚ್ಚಲ ಐಸಿಸಿ ಟ್ರೋಫಿ ಗೆಲ್ಲುವ ನಿರೀಕ್ಷೆಯೊಂದಿಗೆ ಯುಎಇ ವಿಮಾನವೇರಿದ್ದ ಭಾರತ ಮಹಿಳಾ ತಂಡ, 9ನೇ ಆವೃತ್ತಿಯ ಟಿ-20 ವಿಶ್ವಕಪ್ನಲ್ಲಿ ಸೋಲಿನ ಆರಂಭ ಪಡೆದಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ನಲ್ಲಿ ಸಾಧಾರಣ ಪ್ರದರ್ಶನ ತೋರಿದ ಭಾರತ ತಂಡ ಶುಕ್ರವಾರ ನ್ಯೂಜಿಲೆಂಡ್ ವಿರುದ್ಧ 58 ರನ್ ಸೋಲನುಭವಿಸಿತು. ಇದರೊಂದಿಗೆ ಹರ್ಮನ್ ಪ್ರೀತ್ ಕೌರ್ ಪಡೆ ಸೆಮಿಫೈನಲ್ ಹಾದಿಯನ್ನು ಆರಂಭದಲ್ಲೇ ಕಠಿಣಗೊಳಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ತಂಡ 4 ವಿಕೆಟ್ ನಷ್ಟದಲ್ಲಿ 160 ರನ್ ಕಲೆಹಾಕಿತು. ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಭಾರತ ತೀವ್ರ ಬ್ಯಾಟಿಂಗ್ ವೈಫಲ್ಯಕ್ಕೊಳಗಾಯಿತು. 19 ಓವರ್ಗಳಲ್ಲಿ 102 ರನ್ಗೆ ಆಲೌಟ್ ಆಯಿತು.