ಬೆಂಗಳೂರು : ಹೊಸ ವರ್ಷದಲ್ಲಿ ರಾಜ್ಯ ಸರ್ಕಾರ ಜನಸಾಮಾನ್ಯರ ಮೇಲೆ ಮೊದಲ ಹೊರೆ ಹೊರಿಸಿದೆ. ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ತೀರ್ಮಾನಿಸಿದೆ. ರಾಜ್ಯದ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಆದ್ದರಿಂದ ಪ್ರಯಾಣ ದರ ಏರಿಕೆ ಮಾಡಬೇಕೆಂಬ ಬೇಡಿಕೆಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್, ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.