151
ಕಲಬುರಗಿ : ನೀಟ್’ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪ್ರಕರಣದಲ್ಲಿ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು, ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.
ನಗರದ ಸೇಂಟ್ ಮೇರಿ ಕಾಲೇಜಿನ ಪರೀಕ್ಷಾ ಕೇಂದ್ರದೊಳಕ್ಕೆ ಪ್ರವೇಶಿಸುವ ಮುನ್ನ ಶ್ರೀಪಾದೆ ಸುಧೀರ್ ಪಾಟೀಲ್ ಎನ್ನುವ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ಸೂಚಿಸಲಾಗಿತ್ತು. ಈ ಕುರಿತು ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಹೊರಗುತ್ತಿಗೆ ಸಂಸ್ಥೆಗೆ ಸೇರಿದ್ದ ಸಿಬ್ಬಂದಿ ಗಣೇಶ ಹಾಗೂ ಶರಣಗೌಡ ಅವರ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಗೆ ನೊಂದ ವಿದ್ಯಾರ್ಥಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿತ್ತು. ಅದರ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 298ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ

