ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಮೂಲಕ ಪಡೆದಿದ್ದರು ಎನ್ನಲಾದ 20.19 ಕೋಟಿ ರೂಪಾಯಿ ಹಣವನ್ನು ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾಜಿ ಸಚಿವ ಬಿ.ನಾಗೇಂದ್ರ ವ್ಯಯಿಸಿದ್ದರು ಎಂದು ನ್ಯಾಯಾಲಯಕ್ಕೆ ನಿರ್ದೇಶನಾಲಯ ಇ.ಡಿ. ಮಾಹಿತಿ ನೀಡಿದೆ ಎಂದು ತಿಳಿದು ಬಂದಿದೆ.
ನಾಗೇಂದ್ರ ಅವರನ್ನು ಬಂಧಿಸಿದ ಬಳಿಕ ಹೆಚ್ಚಿನ ತನಿಖೆ ಸಲುವಾಗಿ ವಶಕ್ಕೆ ಪಡೆಯಲು ನಗರದ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಇ.ಡಿ. ಅಧಿಕಾರಿಗಳು ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಿದ್ದು, ಅದರಲ್ಲಿ ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಗರಣದ ಹಣ ವೆಚ್ಚವಾಗಿರುವ ಬಗ್ಗೆ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಈ ಸಂಬಂಧ ರಿಮ್ಯಾಂಡ್ ಅಪ್ಲಿಕೇಷನ್ ಎನ್ನಲಾದ ಕೆಲ ಪುಟಗಳು ಕೂಡ ಬಹಿರಂಗವಾಗಿವೆ.