ಬೆಳಗಾವಿ : ಮುಂದಿನ ವರ್ಷದಿಂದ ರಾಜ್ಯದ ಆರ್ಥಿಕ ಸಾಮರ್ಥ್ಯ ಇನ್ನಷ್ಟು ಹೆಚ್ಚುತ್ತದೆ. ಆಗ ಅಭಿವೃದ್ಧಿ ಇನ್ನಷ್ಟು ವೇಗ ಪಡೆಯುತ್ತದೆ. ಮುಂದಿನ ವರ್ಷ ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ ತಲಾ 2000 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ನಗರ ಹೊರವಲಯದಲ್ಲಿ ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅವರು ಮಾತನಾಡಿದರು.ಗ್ರಾಮೀಣ ರಸ್ತೆಗೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿರುತ್ತಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪರವಾಗಿರುತ್ತಾರೆ ಎಂದು ಹೇಳಿದರು. ಇದೇ ವೇಳೆ ಸಭೆಯಲ್ಲಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.