ಬೆಂಗಳೂರು : ರಾಜ್ಯದ ಆರ್ಥಿಕತೆಗೆ ವೇಗ ನೀಡುವುದು ಹಾಗು ಉದ್ಯಮ ಬೆಳವಣಿಗೆಗೆ ಅನುಕೂಲವಾಗುವಂತೆ ಬೆಂಗಳೂರು ಸೇರಿದಂತೆ ಮೂರು ಕಡೆ ಜಾಗತಿಕ ನಾವೀನ್ಯತಾ ಪಾರ್ಕ್ ಸ್ಥಾಪಿಸುವುದು ಹಾಗೂ ಮೈಸೂರಿನ ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ ತಯಾರಿಕಾ ಕ್ಲಸ್ಟರ್ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಐಟಿ-ಬಿಟಿ ಇಲಾಖೆಯಿಂದ ಬೆಂಗಳೂರು ಅರಮನೆಯಲ್ಲಿ ಏರ್ಪಡಿಸಲಾಗಿರುವ ಮೂರು ದಿನಗಳ 27ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗ-24’ವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆ ನೀಡುತ್ತಿದೆ. 20ನೇ ಶತಮಾನದ ಆರಂಭದಲ್ಲಿ ಬೆಂಗಳೂರು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆಯ ಕೇಂದ್ರವಾಗಿ ಬೆಳೆಯಿತು. ಅದರಲ್ಲೂ ಅಂದು ಮುಖ್ಯಮಂತ್ರಿಯಾಗಿದ್ದ ಎಸ್. ಎಂ. ಕೃಷ್ಣ ಅವರ ದೂರದೃಷ್ಟಿತ್ವದಿಂದಾಗಿ ಎಲೆಕ್ಟ್ರಾನಿಕ್ ಸಿಟಿ ಮತ್ತು ಐಟಿ ಪಾರ್ಕ್‌ಗಳು ಸ್ಥಾಪನೆಗೊಂಡು ಬೆಂಗಳೂರು ಪರಿವರ್ತನೆಯಾಗುವಂತಾಯಿತು. ಹಬ್ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಏರೋಸ್ಪೇಸ್ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಗಳಿಸಿದೆ ಎಂದು ಸಿದ್ದರಾಮಯ್ಯ ನುಡಿದರು