ಚೆನ್ನೈ : ತಮಿಳುನಾಡಿನ ವಿರುದು ನಗರ ಜಿಲ್ಲೆಯ ಸತ್ತೂರು ಪ್ರದೇಶದ ಬೊಮ್ಮಯ್ಯಪುರಂ ಗ್ರಾಮದಲ್ಲಿನ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟಕ್ಕೆ 6 ಮಂದಿ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಸಾಯನಿಕಗಳನ್ನು ಬೆರೆಸುವ ಪ್ರಕ್ರಿಯೆಯಲ್ಲಿ ಸ್ಫೋಟ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪಟಾಕಿ ತಯಾರಿಕಾ ಕಾರ್ಖಾನೆ ಪರವಾನಗಿ ಹೊಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಗ್ನಿ ದುರಂತದ ಬಗ್ಗೆ ಮಾಹಿತಿ ದೊರಕಿದ ಕೂಡಲೇ ಅಗ್ನಿಶಾಮಕ ದಳ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.