ಉಡುಪಿ : ಇಲ್ಲಿನ ಮಲ್ಪೆ ಸಮೀಪದ ಹೂಡೆ ಎಂಬಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ
ಅವರಲ್ಲಿ ಮೊಹಮ್ಮದ್ ಮಾಣಿಕ್ ಹುಸೇನ್ (26) ಎಂಬಾತ ಶುಕ್ರವಾರ ದುಬೈಗೆ ತೆರಳಲು ಬಜ್ಪೆ ವಿಮಾನ ನಿಲ್ದಾಣಕ್ಕೆ ಹೋಗಿದ್ದಾಗ ಅಲ್ಲಿನ ಎಮಿಗ್ರೇಶನ್ ಅಧಿಕಾರಿಗಳ ಕೈಯಲ್ಲಿ ನಕಲಿ ಪಾಸ್ ಪೋಟ್೯ನೊಂದಿಗೆ ಸಿಕ್ಕಿಬಿದ್ದಿದ್ದ ನಂತರ ಆತನನ್ನು ಮಲ್ಪೆ ಪೊಲೀಸರಿಗೆ ಒಪ್ಪಿಸಲಾಗಿತ್ತು. ವಿಚಾರಣೆ ವೇಳೆ ಇನ್ನೂ 6 ಮಂದಿ ಹೂಡೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ಒಂದು ಮನೆಯಲ್ಲಿ ವಾಸವಾಗಿರುವುದು ಪತ್ತೆಯಾಯಿತು. ಇವರೆಲ್ಲರೂ 5 ವರ್ಷಗಳಿಂದ ಕಟ್ಟಡ ಕಾರ್ಮಿಕರಾಗಿ ಇಲ್ಲಿ ವಾಸವಾಗಿದ್ದರು. ಇವರು ಬಾಂಗ್ಲಾದಿಂದ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿ, ನಂತರ ಉಡುಪಿಗೆ ಬಂದಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ