85
ಕೊಪ್ಪಳ : ಪಿಎಸ್‌ಐ ನೇಮಕದಲ್ಲಿ ಹಗರಣವಾಗಿದ್ದರಿಂದ ಖಾಲಿ ಉಳಿದ ಹುದ್ದೆಗಳನ್ನು ಐದು ವರ್ಷಗಳಿಂದ ಭರ್ತಿ ಮಾಡಲು ಸಾಧ್ಯವಾಗಿಲ್ಲ. ರಾಜ್ಯಾದ್ಯಂತ 8,000 ಪೊಲೀಸ್ ಹುದ್ದೆಗಳು ಖಾಲಿ ಆಗಿದ್ದು, ಶೀಘ್ರದಲ್ಲೇ ಭರ್ತಿ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರ ಯಾವುದೇ ನೇಮಕಾತಿ ಮಾಡಿಲ್ಲ. ಹೀಗಾಗಿ ಒಂದಷ್ಟು ಕಡೆ ಸಿಬ್ಬಂದಿ ಕೊರತೆಯಿರುವ ಬಗ್ಗೆ ಮಾಹಿತಿ ಇದೆ. ಈ ಹಿಂದಿನ ಸರ್ಕಾರವಿದ್ದಾಗ ನಡೆದ ಪಿಎಸ್‌ಐ ಹಗರಣದಿಂದ ಯಾವುದೇ ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ನಡೆಯಲಿಲ್ಲ. ನಮ್ಮ ಸರ್ಕಾರ ಎಲ್ಲವನ್ನೂ ಸರಿಪಡಿಸಿ, ಈಗಾಗಲೇ 500 ಪಿಎಸ್‌ಐ ಹುದ್ದೆಗೆ ನೇಮಕ ಮಾಡಿದೆ. ಪಿಎಸ್‌ಐ ಹುದ್ದೆಗೆ ಶೀಘ್ರದಲ್ಲೇ ಪ್ರಕ್ರಿಯೆ ನಡೆಯಲಿದೆ. ಪೊಲೀಸರಿಗೆ ಮುಕ್ತವಾಗಿ ಕೆಲಸ ಮಾಡಲು ಹೇಳಿದ್ದೇವೆ. ಯಾರ ಮೇಲೂ ಒತ್ತಡ ಹೇರಿಲ್ಲ ಎಂದರು

